ಮಲ್ಟಿಪ್ಲೆಕ್ಸ್ ಗಳಲ್ಲಿ ದುಬಾರಿ ಆಹಾರ: ತಕ್ಷಣಕ್ಕೆ ಯಾವುದೇ ಕ್ರಮ ಇಲ್ಲ

Multiplex and food: minister Zameer ahmed reaction

18-07-2018

ಬೆಂಗಳೂರು: ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಿಗೆ ಹೊರಗಿನಿಂದ ಆಹಾರ ಪದಾರ್ಥಗಳನ್ನು ಥಿಯೇಟರ್ ಒಳಗೆ ಕೊಂಡೊಯ್ಯುವ ಪ್ರಕರಣ ನ್ಯಾಯಾಲಯದಲ್ಲಿದ್ದು, ಸರ್ಕಾರ ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಆಹಾರ ಪದಾರ್ಥಗಳಿಗೆ ಐದುಪಟ್ಟು ದರ ವಿಧಿಸುತ್ತಿರುವ ವಿರುದ್ಧ ಕ್ರಮ ಕೈಗೊಳ್ಳಲು ನಾವು ಸಿದ್ಧ. ಆದರೆ, ಹೊರಗಿನಿಂದ ಆಹಾರ ಪದಾರ್ಥಗಳನ್ನು ಒಳಗೆ ಕೊಂಡೊಯ್ಯಲು ಅವಕಾಶ ನೀಡದಿರುವ ಪ್ರಕರಣ ಇದೀಗ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಹಾಗಾಗಿ ಸದ್ಯದ ಸ್ಥಿತಿಯಲ್ಲಿ ಸರ್ಕಾರ ಏನೂ ಮಾಡಲಾಗದು. ಆದರೂ ಮಲ್ಟಿಪ್ಲೆಕ್ಸ್ ಮಾಲೀಕರನ್ನು ಕರೆದು ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಆದರೆ ಕುಡಿಯುವ ನೀರಿಗೆ ಅತಿ ಹೆಚ್ಚು ದರ ವಿಧಿಸಲಾಗುತ್ತಿರುವ ಬಗ್ಗೆ ದೂರುಗಳಿದ್ದು, ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ. ಜತೆಗೆ ಮಲ್ಟಿಪ್ಲೆಕ್ಸ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲು ಉದ್ದೇಶಿಸಿದ್ದೇನೆ ಎಂದರು.

ವಕ್ಫ್ ಆಸ್ತಿ ಕಬಳಿಕೆ ವಿಚಾರದಲ್ಲಿ ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ತಾವು ಸಮ್ಮತಿ ನೀಡಿಲ್ಲ. ಪ್ರಕರಣ ನ್ಯಾಯಾಲಯದಲ್ಲಿರುವಾಗ ನಾವು ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಅನ್ವರ್ ಮಾಣಿಪ್ಪಾಡಿ ಕೂಡ ತಮ್ಮ ಅಧಿಕಾರಾವಧಿ ಮುಗಿದ ಬಳಿಕ ವರದಿ ಸಲ್ಲಿಸಿದ್ದಾರೆ. ಹಾಗಾಗಿ ವರದಿ ಮಾನ್ಯತೆ ಕಳೆದುಕೊಂಡಿದೆ. ಆದರೂ ದೇವರ ಆಸ್ತಿ ರಕ್ಷಣೆ ಕಾರಣಕ್ಕಾಗಿ ಮಾಣಿಪ್ಪಾಡಿ ಅವರು ವೈಯಕ್ತಿಕವಾಗಿ ಬಂದು ಭೇಟಿಯಾಗಿ ಎಲ್ಲೆಲ್ಲಿ ವಕ್ಫ್ ಆಸ್ತಿ ಕಬಳಿಕೆಯಾಗಿದೆ ಎಂಬುದನ್ನು ದಾಖಲೆ ಸಹಿತ ತೋರಿಸಿದರೆ ಕ್ರಮ ಕೈಗೊಳ್ಳಲು ಸಿದ್ಧವಿರುವುದಾಗಿ ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Pakka deal party ee Zameer 420
  • Karthik
  • Professional