ಇದೇ ತಿಂಗಳ 28ಕ್ಕೆ ಅಮಿತ್ ಷಾ ಬೆಂಗಳೂರಿಗೆ

BJP national president amit shah visiting bangalore on 28th this month

18-07-2018

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿರುವ ಬೆನ್ನಲ್ಲೇ ಮಿಷನ್ 25 ಕಾರ್ಯತಂತ್ರವನ್ನು ಸಾಕಾರಗೊಳಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈ ಮಾಸಾಂತ್ಯದಲ್ಲಿ ಸ್ವತಃ ಕಾರ್ಯ ಪ್ರವೃತ್ತರಾಗಲಿದ್ದಾರೆ.

ಅಮಿತ್ ಷಾ ಅವರು ಇದೇ 28ರಂದು ನಗರಕ್ಕೆ ಆಗಮಿಸಲಿದ್ದು, ಚುನಾವಣಾ ಸಿದ್ಧತೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಪಕ್ಷದ ವಿವಿಧ ವಿಭಾಗಗಳ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯ ಪದಾಧಿಕಾರಿಗಳು, ಸಂಸದರು, ಶಾಸಕರ ಜೊತೆಯೂ ಸಹ ಗಹನವಾದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಕಳೆದ ಮೇ 12ರಂದು ನಡೆದ ವಿಧಾನಸಭಾ ಚುನಾವವಣೆ ನಂತರ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿರಲಿಲ್ಲ.

 


ಸಂಬಂಧಿತ ಟ್ಯಾಗ್ಗಳು

amit sha BJP ಮಾಸಾಂತ್ಯ ಪದಾಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ