ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ

Shiroor Mutt seer Lakshmi Vara Tirtha Swami passed away

19-07-2018

ಉಡುಪಿ: ತೀವ್ರ ಉಸಿರಾಟದ ತೊಂದರೆ ಹಾಗು ರಕ್ತವಾಂತಿ, ಹೊಟ್ಟೆನೋವಿನಿಂದ ಬಳಲುತ್ತಿದ್ದ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ (55) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇದ್ದಕ್ಕಿದ್ದಂತೆ ಶ್ರೀಗಳ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಸಿರಾಟಕ್ಕೆ ತೀವ್ರ ಸಮಸ್ಯೆ ಎದುರಾಗಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು, ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸ್ವಾಮೀಜಿಗಳ ನಿಧನಕ್ಕೆ , ಗಣ್ಯರು, ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಶ್ರೀಗಳ ಪಾರ್ಥಿವ ಶರೀರವನ್ನು ಇಂದು ಶಿರೂರಿನ ಮೂಲಮಠಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

ಉಸಿರಾಟ ರಕ್ತವಾಂತಿ Lakshmi Vara Tirtha swamiji


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ