‘ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಿ’ ಸಿದ್ದು ತಾಕೀತು

Complete the work on time: siddaramaiah

19-07-2018

ಬಾಗಕೋಟೆ: ಬಾದಾಮಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಸಿದ್ದರಾಮಯ್ಯ ಕೆಶಿಪ್(ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಕೆಶಿಪ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ ಅವರು, ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ವಿಭಜಕ, ಎಲ್ಇಡಿ ದೀಪ ಅಳವಡಿಸಬೇಕು. ಸುಸಜ್ಜಿತ ಪಾದಚಾರಿ ಮಾರ್ಗ ನಿರ್ಮಿಸಬೇಕು ಎಂದು ಸೂಚಿಸಿದ್ದಾರೆ.

ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಆಗಸ್ಟ್ ಅಂತ್ಯದ ವೇಳೆಗೆ ಎಲ್ಲ ಕಾಮಗಾರಿ ಪೂರ್ಣಗೊಂಡಿರಬೇಕು ಎಂದು ತಾಕೀತು ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Siddaramaiah kship project ಆಗಸ್ಟ್ ಸುಸಜ್ಜಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ