ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

Lakshmivara tirtha swami passed away: BSY, Eshwarappa,HDD condolence

19-07-2018

ಬೆಂಗಳೂರು: ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನ ಹಿನ್ನೆಲೆ, ಶ್ರೀಗಳ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಶ್ರೀಗಳ ಅಗಲಿಕೆ ಅಪಾರ ಭಕ್ತ ಸಮೂಹಕ್ಕೆ ತುಂಬಲಾರದ ನಷ್ಟ ಎಂದರು. ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಸಮಾಜವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿದ್ದರು. ಅತ್ಯಂತ ಕಿರಿಯ ವಯಸ್ಸಿನಲ್ಲೇ ಸನ್ಯಾಸತ್ವ ಪಡೆದಿದ್ದ ಶ್ರೀಗಳಿಗೆ ಸಾಹಿತ್ಯ, ಸಂಗೀತದ ಬಗ್ಗೆ ಬಹಳ ಆಸಕ್ತಿ ಎಂದು ನೆನಪಿಸಿಕೊಂಡರು. ಭಗವಂತ ಭಕ್ತ ಸಮೂಹಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ದೇವೇಗೌಡರು ಸಂತಾಪ ಸೂಚಿಸಿದ್ದಾರೆ.

ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದು ಮನಸ್ಸಿಗೆ ಅತೀವ ನೋವು ತಂದಿದೆ ಎಂದು ಬಿ.ಎಸ್.ಯಡಿಯೂರಪ್ಪ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಎಸ್ವೈ, ಸ್ವಾಮೀಜಿ ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದರು. ಶ್ರೀಕೃಷ್ಣನ ಸೇವೆಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಇನ್ನು ಕೆ.ಎಸ್.ಈಶ್ವರಪ್ಪ ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲಕ್ಷ್ಮೀವರ ತೀರ್ಥರು ದೈವಾಧೀನರಾದ ಸುದ್ದಿ ತಿಳಿದು ಬಹಳ ನೋವಾಗಿದೆ. ಸ್ವಾಮೀಜಿಗಳು ಧಾರ್ಮಿಕವಾಗಿ ಬಹಳ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು. ಲಕ್ಷ್ಮೀವರ ಶ್ರೀಗಳ ವಿಚಾರದಲ್ಲಿ ಗೂಂದಲಗಳಿದ್ದರೂ ಸಾಮಾಜಿಕ ಚಟುವಟಿಕೆಗಳಿಂದ ಕೊಡಿದ ವ್ಯಕ್ತಿಯಾಗಿದ್ದರು. ಇಂತಹ ವ್ಯಕ್ತಿಯನ್ನು ಕಳೆದುಕೊಂಡಿರುವುದು ಸಾಕಷ್ಟು ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B.S.Yeddyurappa K.S.Eshwarappa ಬೇಸರ ಲಕ್ಷ್ಮೀವರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ