ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ: ಈಶ್ವರ್ ಖಂಡ್ರೆ



20-07-2018

ಹುಬ್ಬಳ್ಳಿ: ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ನನ್ನಮೇಲಿದೆ. ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಅಗಮಿಸಿದ್ದೇನೆ ಎಂದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯುತ್ತದೆ ಎಂಬ ಹೇಳಿಕೆಯನ್ನೂ ನೀಡಿದ್ದಾರೆ. ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಅಗಿಲ್ಲ, ಆಗಲು‌ ಬಿಡುವುದಿಲ್ಲ ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಜನ ಬಿಜೆಪಿಯ ವೈಫಲ್ಯ ಕಂಡಿದ್ದಾರೆ. ಸುಳ್ಳನ್ನೇ ಸಾವಿರ ಸಾರಿ ಹೇಳಿ ಜನರನ್ನು ದಾರಿ ತಪ್ಪಿಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇದು ನಡೆಯಲ್ಲ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Eshwara Khandre lingayat ಚುನಾವಣೆ ವಿಶ್ವಾಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ