ಗೋ ಹತ್ಯೆ ನಿಷೇಧ ಕಾನೂನನ್ನು ವಿರೋಧಿಸಿ ಪ್ರತಿಭಟನೆ !

Kannada News

29-05-2017

ಬೆಂಗಳೂರು:- ಗೋ ಹತ್ಯೆ ನಿಷೇಧ ಕಾನೂನನ್ನು ವಿರೋಧಿಸಿ ನಗರದ ಟೌನ್‌‌ಹಾಲ್‌‌ ಬಳಿ ಇಂದು  ಗೋ ಮಾಂಸ ತಿನ್ನುವ ಕಾರ್ಯಕ್ರಮವನ್ನು ಎಸ್ಎಫ್ಐ ಹಾಗೂ ಡಿಎಸ್ಎಫ್ಐ ಸಂಘಟನೆ ಹಮ್ಮಿಕೊಂಡಿದೆ. ಇಂದು ಸಂಜೆ 4 ಗಂಟೆಗೆ ಮೂವ್‌‌ಮೆಂಟ್ ಬೆಂಗಳೂರು ಎಂಬ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಗೋ ಮಾಂಸ ತಿಂದು ಪ್ರತಿಭಟನೆ ನಡೆಸಲು ನಿರ್ಧಾರಿಸಲಾಗಿದ್ದು, ಬೀಫ್ ಫೆಸ್ಟ್‌ಗೆ ಪೊಲೀಸರಿಂದ ಕಾರ್ಯಕ್ರಮ ಆಯೋಜಕರು ಅನುಮತಿ ಪಡೆದಿಲ್ಲ. ಆದ್ದರಿಂದ ಈ ಕಾರ್ಯಕ್ರಮ (ಬೀಫ್‌ ಫೆಸ್ಟ್‌) ಕ್ಕೆ ಅನುಮತಿ ನೀಡಿಲ್ಲ ಎಂದು ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ಅವರು ಟ್ವೀಟ್‌‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ