ಲೋಕಸಭೆ ಚುನಾವಣೆ: ‘ಮೈತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ’

Lok Sabha polls:

20-07-2018

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುವುದು ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ವಿಚಾರವನ್ನು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ಮೈತ್ರಿ ವಿಚಾರವಾಗಿ ಪಕ್ಷದ ಮಟ್ಟದಲ್ಲಿ ಇನ್ನೂ ಚರ್ಚೆ ಆರಂಭವಾಗಿಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಮೈತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಸಧ್ಯಕ್ಕೆ ಮೈತ್ರಿಗೆ ಕಾಂಗ್ರೆಸ್ ನಲ್ಲಿ ಯಾರೂ ವಿರೋಧ ಮಾಡಿಲ್ಲ ಎಂದು ಅವರು ಹೇಳಿದರು.


ಸಂಬಂಧಿತ ಟ್ಯಾಗ್ಗಳು

KPCC Dinesh Gundu Rao ಮೈತ್ರಿ ಲೋಕಸಭೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ