ಕೇಂದ್ರದ ವಿರುದ್ಧ ಅವಿಶ್ವಾಸ-ಪ್ರತಿಪಕ್ಷಗಳಿಗೆ ಗೆಲುವು: ಪರಮೇಶ್ವರ್

No confidence motion: reaction of DCM G.Parameshwar

20-07-2018

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಮಂಡನೆಯಾಗಿರುವ ಅವಿಶ್ವಾಸ ನಿರ್ಣಯದಲ್ಲಿ ಪ್ರತಿಪಕ್ಷಗಳು ಗೆಲ್ಲಲಿವೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಕಠಿಣ ನಿಯಮಗಳಿಂದ ದೇಶದ ಜನರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ದೇಶದ ಜನರು ಕೂಡ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ಪ್ರತಿ ಪಕ್ಷದವರು ಕೇಂದ್ರದ ನರೇಂದ್ರ ಮೋದಿ ಸರ್ಕಾರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು. ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಪ್ರತಿ ಪಕ್ಷಗಳು ಗೆಲುವು ಸಾಧಿಸಲಿವೆ ಎಂದು ಹೇಳಿದರು.

 ಬಿಬಿಎಂಪಿಯಲ್ಲಿ ಬೋಗಸ್ ಪೌರಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಜಿ ಪರಮೇಶ್ವರ್, ಬೋಗಸ್ ಪೌರಕಾರ್ಮಿಕರ ಬಗ್ಗೆ ತನಿಖೆ ನಡೆಯುತ್ತಿದೆ. 18,000 ಖಾಯಂ ಪೌರಕಾರ್ಮಿಕರು ಇದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದ ಮೇಲೆ ಇರುವವರು. ಗುತ್ತಿಗೆ ಮೇಲೆ ನೇಮಕ ಮಾಡಿಕೊಂಡಿರೋದು ಗುತ್ತಿಗೆದಾರರ ಜವಾಬ್ದಾರಿ ಎಂದು ಹೇಳಿದರು. 4೦೦೦ಮಂದಿಯನ್ನು ನೇಮಕ ಮಾಡಿಕೊಳ್ಳುತ್ತೇವೆ. ಗುತ್ತಿಗೆ ಮೇಲೆ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರನ್ನ ನೇಮಕ ಮಾಡಿಕೊಳ್ಳುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ