‘ಐಎಎಸ್, ಐಪಿಎಸ್ ಮಾದರಿಯಲ್ಲಿ ಐಎಸ್ ಡಿಎಸ್

skill development ministry planning to start

20-07-2018

ಬೆಂಗಳೂರು: ಉದ್ಯೋಗಾಕಾಂಕ್ಷಿ ಯುವಜನತೆಗೆ ಕೌಶಲಗಳ ತರಬೇತಿ ನೀಡಿ, ಅವರ ಸ್ವಾವಲಂಬಿ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ದೇಶದೆಲ್ಲೆಡೆ ಕೌಶಲಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರದ ಕೌಶಲಾಭಿವೃದ್ಧಿ ಖಾತೆ ಸಚಿವ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ ಡೆವಲಪ್ಮೆಂಟ್ ಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಈ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಎಎಸ್ ಹಾಗೂ ಐಪಿಎಸ್ ಮಾದರಿಯಲ್ಲಿ ಕೇಂದ್ರ ಲೋಕಸೇವಾ ಆಯೋಗ ಇಂಡಿಯನ್ ಸ್ಕಿಲ್ ಡೆವಲಪ್ಮೆಂಟ್ ಸರ್ವಿಸ್–ಐಎಸ್‍ಡಿಎಸ್ ಆರಂಭಿಸಲು ಕೇಂದ್ರ ಕೌಶಲಾಭಿವೃದ್ಧಿ ಮಂತ್ರಾಲಯ ಸಿದ್ಧತೆ ಕೈಗೊಂಡಿದೆ ಎಂದು ಸಚಿವ ಅನಂತಕುಮಾರ ಹೆಗಡೆ ಇದೇ ವೇಳೆ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ