ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡಿ: ವಿವಿಗಳಿಗೆ ಯುಜಿಸಿ ಸೂಚನೆ

Postpone recruitment processes: UGC notice to all universities

20-07-2018

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನ ರಜಾ ಕಾಲದ ಪೀಠ ವಿಚಾರಣೆ ಇತ್ಯರ್ಥಗೊಳಿಸುವವರೆಗೂ ಎಲ್ಲ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವವಿದ್ಯಾಲಯ ಅನುದಾನ ಆಯೋಗ-ಯುಜಿಸಿ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸಲ್ಲಿಸಿರುವ ವಿಚಾರಣೆ ಸುಪ್ರೀಂ ಕೋರ್ಟ್‍ನ ರಜಾ ಕಾಲದ ಪೀಠದಲ್ಲಿ ನಡೆಯುತ್ತಿದೆ. ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಮೇರೆಗೆ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ಕೆಲವು ನಿರ್ಣಯಗಳನ್ನು ಕೈಗೊಂಡಿತ್ತು.

ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ಯುಜಿಸಿ ಜಂಟಿಯಾಗಿ ಸುಪ್ರೀಂ ಕೋರ್ಟ್ ರಜಾಕಾಲದ ಪೀಠದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ಅತ್ಯಂತ ತ್ವರಿತವಾಗಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ