ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ

BJP Working Committee Meeting Under R Ashok at BJP office

21-07-2018

ಬೆಂಗಳೂರು: ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೆಂಗಳೂರು ನಗರ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಪಕ್ಷದ ಕಚೇರಿಯಲ್ಲಿ ಮಹತ್ವದ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ತಯಾರಿ ಕುರಿತು ಚರ್ಚೆ, ವಿಧಾನಸಭಾ ಚುನಾವಣೆಯಲ್ಲಿ ಉಂಟಾದ ಸೋಲು-ಗೆಲುವಿನ ಚರ್ಚೆ, ಜಯನಗರದಲ್ಲಿ ಬಿಜೆಪಿಗಾದ ಸೋಲು, ಆರ್.ಆರ್.ನಗರದಲ್ಲಾದ ಸೋಲುಗಳ ಬಗ್ಗೆ ಚರ್ಚೆ ನಡೆಯಲಿದೆ.

ಬೆಂಗಳೂರು ಬಿಜೆಪಿ ಮುಖಂಡರ ಮಧ್ಯೆ ಭಿನ್ನಾಭಿಪ್ರಾಯ ಕುರಿತು ಕಾರ್ಯಕತರಲ್ಲಿ ಅಸಮಾಧಾನ ಉಂಟಾಗಿತ್ತು ಎನ್ನಲಾದ ವಿಚಾರ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದು, ಬೆಂಗಳೂರು ಬಿಜೆಪಿ ನಗರ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ.

ಸಭೆಯಲ್ಲಿ ಶಾಸಕ ಅಶ್ವಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ಜಯದೇವ್, ರಾಜ್ಯ ಕೋಶಾಧ್ಯಕ್ಷ ಸುಬ್ಬಣ್ಣ, ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್.ಸದಾಶಿವ ಸೇರಿದಂತೆ ನಗರ ಬಿಜೆಪಿ ಕಾರ್ಪೊರೇಟರ್ ಗಳು ಭಾಗಿಯಾಗಿದ್ದರು. ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭರೆಡ್ಡಿ ಗೈರಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ