ಬಳ್ಳಾರಿ,ಹಾವೇರಿ,ವಿಜಯಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

students huge protest at hubli,haveri,vijayapura and other places

21-07-2018

ಬಳ್ಳಾರಿ: ರಾಜ್ಯಾದ್ಯಂತ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ, ರಾಜ್ಯದ ಹಲವೆಡೆ ಇಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಶಾಲಾ-ಕಾಲೇಜ್‌ ಬಂದ್ ಮಾಡಿ ಬೀದಿಗಿಳಿದ ವಿದ್ಯಾರ್ಥಿಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದ್ದಾರೆ.

ರಾಯಚೂರಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಶಾಲಾ-ಕಾಲೇಜು ಬಂದ್ ಗೆ ಕರೆ ನೀಡಿದ್ದು, ಖಾಸಗಿ ಶಾಲಾ ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳು ಆಗಮಿಸಿರಲಿಲ್ಲ. ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹಾವೇರಿಯಲ್ಲೂ ಎಐಡಿಎಸ್ಒ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಶಾಲಾ ಕಾಲೇಜುಗಳ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ವಿಜಯಪುರದಲ್ಲೂ ತರಗತಿಗಳನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನಗರದ ಪಿಡಿಜೆ, ದರಬಾರ ಸೇರಿದಂತೆ ನಾನಾ ಶಾಲಾ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

free Bus Pass protest ಪ್ರತಿಭಟನೆ ಎಐಡಿಎಸ್ಒ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ