ನಾಳೆ ದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ

AICC Executive Committee Meeting in Delhi tomorrow

21-07-2018

ಬೆಂಗಳೂರು: ನಾಳೆ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ದೆಹಲಿಯಲ್ಲಿ ನಡೆಯಲಿದ್ದು,  ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಕ್ಷದ ನೀತಿ ನಿರೂಪಣಾ ಸಂಸ್ಥೆಯಾಗಿದೆ. ಕಾರ್ಯಕಾರಿ ಸಮಿತಿಗೆ ಕಳೆದ ವಾರ ಸದಸ್ಯರಾಗಿ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯಲ್ಲಿ 58 ಸದಸ್ಯರಿದ್ದಾರೆ. ಕಾಂಗ್ರೆಸ್ ಅಂಗ ಸಂಸ್ಥೆಗಳಾದ ಐಎನ್‌ಟಿಯುಸಿ, ಸೇವಾ ದಳ, ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್‌ಎಸ್‌ಯುಐನ ಮುಖ್ಯಸ್ಥರು ಸಭೆಗೆ ವಿಶೇಷ ಆಹ್ವಾನಿತರಾಗಿದ್ದು, ಲೋಕಸಭೆ ಚುನಾವಣೆಗೆ ಸಿದ್ಧತೆ, ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.


ಸಂಬಂಧಿತ ಟ್ಯಾಗ್ಗಳು

AICC siddaramaiah ಕಾರ್ಯಕಾರಿ ಸಮಿತಿ ನೀತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ