ಚನ್ನಪಟ್ಟಣದಲ್ಲಿ ಜೆಡಿಎಸ್ ಬೃಹತ್ ಸಮಾವೇಶ

CM Kumaraswamy to visit channapatna today

23-07-2018

ರಾಮನಗರ: ಇಂದು ಚನ್ನಪಟ್ಟಣಕ್ಕೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಚನ್ನಪಟ್ಟಣದಿಂದ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಕ್ಷೇತ್ರದಲ್ಲಿನ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ ನಗರದ ಹಲಸಿನಮರದೊಡ್ಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ನಂತರದಲ್ಲಿ ಸಾತನೂರಿನಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಆಗಮಿಸಿ ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಮಾವೇಶದಲ್ಲಿ 25ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದ್ದು ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಸಂಪುಟದ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸಮಾವೇಶ ಮುಗಿದ ಬಳಿಕ ಚನ್ನಪಟ್ಟಣ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ-ಅಹವಾಲು ಸ್ವೀಕರಿಸಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆ ಚನ್ನಪಟ್ಟಣ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy programmes ಸಮಾವೇಶ ಚನ್ನಪಟ್ಟಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ