ವೈದ್ಯರ ನಿರ್ಲಕ್ಷ್ಯ: ಒಂದೂವರೆ ವರ್ಷದ ಮಗು ಸಾವು!

Doctors neglect: One and a half year old child died!

23-07-2018

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಮಗುವಿನ ಪೋಷಕರು ಆರೋಪಿಸಿದ್ದಾರೆ. ಒಂದೂವರೆ ವರ್ಷದ ಸುಭಾಗ್ ಹೆಸರಿನ ಗಂಡು ಮಗು ಆಸ್ಪತ್ರೆಯಲ್ಲೇ ಮೃತಪಟ್ಟಿದೆ. ಹೆಚ್.ಡಿ.ಕೋಟೆ ಪಟ್ಟಣದ ಸೇಂಟ್ ಮೇರಿಸ್ ಆಸ್ಪತ್ರೆಗೆ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಮಗುವನ್ನು ನಿನ್ನೆ ಬೆಳಿಗ್ಗೆ ದಾಖಲಿಸಲಾಗಿತ್ತು. ಆದರೆ ‌ಮಧ್ಯಾಹ್ನದ ವೇಳೆಗೆ ಏಕಾಏಕಿ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಪೋಷಕರು ಚಿಕಿತ್ಸೆ ನೀಡುವಲ್ಲಿ ಎಡವಟ್ಟು ಮಾಡಿ ಮಗುವನ್ನು ಸಾಯಿಸಿದ್ದಾರೆಂದು ಎಂದು ವೈದ್ಯರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದರು. ಘಟನೆಯಿಂದ ಆಸ್ಪತ್ರೆಯಲ್ಲಿ ಉದ್ವಿಗ್ನ ಪರಿಸ್ಥಿತಿ‌ ನಿರ್ಮಾಣವಾಗಿತ್ತು. ಸಂಜೆವರೆಗೂ ಆಸ್ಪತ್ರೆಯಲ್ಲೇ ಮಗು ಶವವನ್ನು ಇಟ್ಟುಕೊಂಡು ಪೋಷಕರು ಪ್ರತಿಭಟಿಸಿದ್ದಾರೆ. ಆಸ್ಪತ್ರೆಯಲ್ಲಿ ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆದರೆ ಈ ಬಗ್ಗೆ ಆಸ್ಪತ್ರೆ ವೈದ್ಯರು ಹೇಳುವುದೇ ಬೇರೆ, ಮಗುವಿಗೆ ಉಸಿರಾಟದ ತೊಂದರೆ ಇತ್ತು, ಆದ್ದರಿಂದ ವೆಂಟಿಲೇಟರ್ ಅವಶ್ಯಕತೆ ಇದೆ, ಇದು ಮೈಸೂರಿನ ಆಸ್ಪತ್ರೆಯಲ್ಲಿರುವುದಾಗಿಯೂ, ದಾರಿ ಮಧ್ಯೆ ಮಗು ಸಾಯುವ ಸಾಧ್ಯತೆಗಳು ಇವೆ ಎಂದು ಹೇಳಿದ್ದೆವು ಎಂದು, ಈ ಎಲ್ಲಾ ಮಾಹಿತಿಯನ್ನು ಮೊದಲೇ ನೀಡಿರುವುದಾಗಿ ವೈದ್ಯರು ಹೇಳಿದ್ದಾರೆ. ಮತ್ತು ಸುಭಾಗ್ ಪೋಷಕರು ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಈ ಮಾತನ್ನ ಆಸ್ಪತ್ರೆಗೆ ಆಗಮಿಸುವ ಮುನ್ನವೇ ಹೇಳಬೇಕಿತ್ತು ಎಂದು ಸುಭಾಗ್ ಪೋಷಕರು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಮಾತಿನ ಚಕಮಕಿ ನಡೆಯಿತು. ಸುಭಾಗ್ ಪೋಷಕರಿಂದ ಆಸ್ಪತ್ರೆ ವೈದ್ಯರ ವಿರುದ್ಧ ದೂರು ದಾಖಲಿಸಲು ಚಿಂತನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Doctor private hospital ಆಸ್ಪತ್ರೆ ವೆಂಟಿಲೇಟರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ