ಶಿರೂರು ಶ್ರೀ ಅನುಮಾನಾಸ್ಪದ ಸಾವು: ತೀವ್ರಗೊಂಡ ತನಿಖೆ

Lakshmivara tirtha Swamiji suspicious death: intensified investigation

23-07-2018

ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅನುಮಾನಾಸ್ಪದ ಸಾವು ಪ್ರಕರಣ ಕುರಿತಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮೊತ್ತೊಂದು ಮಾಹಿತಿ ಲಭ್ಯವಾಗಿದ್ದು ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಶಿರೂರು ಮೂಲ ಮಠದಲ್ಲಿದ್ದ ಸಿಸಿಟಿವಿ ಡಿವಿಆರ್(ಡಿಜಿಟಲ್ ವಿಡಿಯೋ ರೆಕಾರ್ಡರ್) ನಾಪತ್ತೆಯಾಗಿದೆಯಂತೆ. ಸ್ವಾಮೀಜಿ ಆಸ್ಪತ್ರೆಗೆ ದಾಖಲಾದ ದಿನ‌ವೇ ಡಿವಿಆರ್ ನಾಪತ್ತೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದು, ಅಥವಾ ಈ ಮೊದಲೇ ಸ್ವಾಮೀಜಿ ಡಿವಿಆರ್ ತೆಗೆದಿರಿಸಿಟ್ಟಿರುವ ಸಾಧ್ಯತೆ ನಿಟ್ಟಿನಲ್ಲೂ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ನಂತರ ಮಠಕ್ಕೆ ಒಬ್ಬ ವ್ಯಕ್ತಿ ಬಂದಿರುವುದಾಗಿ ಹೇಳಲಾಗುತ್ತಿದ್ದು, ಆತನೇ ಡಿವಿಆರ್ ತೆಗೆದುಕೊಂಡು ಹೋಗಿರುವ ಸಾಧ್ಯತೆ ಬಗ್ಗೆಯೂ ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Lakshmivara tirtha Shiroor Mutt ಸಿಸಿಟಿವಿ ಡಿಜಿಟಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ