ತೀವ್ರ ಅನುಮಾನಕ್ಕೆ ಎಡೆಮಾಡಿಕೊಟ್ಟ ಮಹಿಳೆ ಸಾವು!

suspected death of a woman at bengaluru!

23-07-2018

ಬೆಂಗಳೂರು: ಕೊತ್ತನೂರಿನ ರಾಮಕೃಷ್ಣ ಹೆಗಡೆ ನಗರದಲ್ಲಿ ಗೃಹಿಣಿಯೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದ್ದು ತೀವ್ರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊತ್ತನೂರಿನ ಹೆಗಡೆ ನಗರದ ಶಬರಿ ಬಡಾವಣೆಯ 6ನೇ ಕ್ರಾಸ್ ನಿವಾಸಿ ಗಾಯತ್ರಿ (25)ಎಂದು  ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ನಾಲ್ಕುವರೆ ವರ್ಷಗಳ ಹಿಂದೆ ಅಭಿಷೇಕ್ ಎಂಬವರಿಗೆ ಗಾಯತ್ರಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು. ಅಭಿಷೇಕ್ ಟ್ರಾವೆಲ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ದಂಪತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಗಾಯತ್ರಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. ಮಗಳು ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಕೊತ್ತನೂರಿಗೆ ಆಗಮಿಸಿದ ಪೋಷಕರು, ಅಭಿಷೇಕ್ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ.

ಅಭಿಷೇಕ್ ತಮ್ಮ ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ತವರು ಮನೆಯಿಂದ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಇತ್ತ ಪತಿ ಮನೆಯವರು ಗಾಯಿತ್ರಿಯ ಮಾನಸಿಕ ದೃಢತೆ ಹೊಂದಿರದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

suspect hang suicide ವರದಕ್ಷಿಣೆ ಅನುಮಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ