ತೃತೀಯರಂಗ ನಾಯಕತ್ವಕ್ಕೆ‌ ಯಾರೂ ಒಪ್ಪಿಕೊಳ್ಳುವುದಿಲ್ಲ: ಶೆಟ್ಟರ್

Modi to be PM again said Jagadish Shettar

23-07-2018

ಹುಬ್ಬಳ್ಳಿ: ‘ತೃತೀಯರಂಗ ನಾಯಕತ್ವಕ್ಕೆ‌ ಯಾರೂ ಒಪ್ಪಿಕೊಳ್ಳುವುದಿಲ್ಲ, ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ‘ವಿವಿಧ ಪ್ರಾದೇಶಿಕ ಪಕ್ಷಗಳ ಒಕ್ಕೂಟ ತೃತೀಯರಂಗದವರಲ್ಲೇ ಒಗ್ಗಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿಯಾಗಿ ಮಾಡಲು ಸಾಧ್ಯವಿಲ್ಲ, ರಾಹುಲ್ ಅವರನ್ನು ಪ್ರಧಾನಿಯಾಗಿ ಮಾಡಲಿದ್ದೇವೆ ಎಂದು ಬಹಿರಂಗವಾಗಿ ಸ್ಪಷ್ಟಪಡಿಸಲಿ ಎಂದರು. ರಾಹುಲ್ ಗಾಂಧಿ ಪ್ರಧಾನಿಯಾಗುವ ಕನಸು ಯಶಸ್ವಿಯಾಗಲು ‌ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ.

ಮೋದಿಯವರ ನಡೆ ಹಾಗೂ ಅವರ ಅಭಿವೃದ್ಧಿಯೇ ಮುಂದಿನ ಚುನಾವಣೆಗೆ ಸಹಕಾರಿಯಾಗಲಿದೆ. ನರೇಂದ್ರ ಮೋದಿಯವರೇ ಮುಂದಿನ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ ಎಂದು ಪುನರುಚ್ಛರಿಸಿದ್ದಾರೆ.

ಇನ್ನು ರಾಜ್ಯ ಬಜೆಟ್ ಕುರಿತು, ಬಜೆಟ್ ನಲ್ಲಿ 55 ಸಾವಿರ ಕೋಟಿ ಬಿಡುಗಡೆ ಮಾಡಿರುವುದನ್ನು ಅಂಕಿ ಸಂಖ್ಯೆಯ ಮೂಲಕ ಸ್ಪಷ್ಟಪಡಿಸಲಿ, ಯಾವ ಯಾವ ಇಲಾಖೆಗೆ ಬಿಡುಗಡೆ ಮಾಡಿದ್ದಾರೆ ಎಂಬುದನ್ನು ತೋರಿಸಲಿ, ಮುಖ್ಯಮಂತ್ರಿಗಳು ಬಜೆಟ್ ನ ಪ್ರತಿ ಶೀಘ್ರವೇ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಬಜೆಟ್ ಗೆ ಸಂಬಂಧಿಸಿದಂತೆ ಬಹಿರಂಗ ಚರ್ಚೆಗೆ ಸಿದ್ಧ ಎಂದಿರುವುದರಲ್ಲಿ ಅರ್ಥವೇ ಇಲ್ಲ. ರಾಜ್ಯದ 50ಹೊಸ ತಾಲ್ಲೂಕುಗಳಲ್ಲಿ 38ತಾಲ್ಲೂಕುಗಳು ಉತ್ತರ ಕರ್ನಾಟಕದಲ್ಲಿವೆ, ಪ್ರತಿ ತಾಲ್ಲೂಕಿಗೆ ಕನಿಷ್ಠ 5ಕೋಟಿ ಅನುದಾನ ಬಿಡುಗಡೆ ಮಾಡಲಿ, ಮುಖ್ಯಮಂತ್ರಿಗಳು ಈ ಹಿಂದೆ ಉತ್ತರ ಕರ್ನಾಟಕದಲ್ಲಿ ಯಾರ ಕಾಲದಲ್ಲಿ ಎಷ್ಟು ಅನುದಾನ ಖರ್ಚಾಗಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಲಿ ಎಂದರು.

 


ಸಂಬಂಧಿತ ಟ್ಯಾಗ್ಗಳು

Jagadish Shettar H.D.Kumaraswamy ಖಚಿತ ಪ್ರಧಾನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ