‘ಉತ್ತರ ಕರ್ನಾಟಕದ ಅಭಿವೃದ್ಧಿ ನಿರ್ಲಕ್ಷ್ಯಸಲ್ಲದು’23-07-2018

ಬೆಳಗಾವಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳಲಾಗುತ್ತಿರುವ ವಿಚಾರದ ಕುರಿತು, ಹೋರಾಟಕ್ಕೆ ಧುಮುಕಲು ಸ್ವಾಮೀಜಿಗಳು ನಿರ್ಧರಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ವೀರಶೈವ ಮತ್ತು ಲಿಂಗಾಯತ ಮಠಾಧೀಶರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

‘ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರಿಸುತ್ತಿರುವುದರಿಂದ ಪ್ರತ್ಯೇಕ ರಾಜ್ಯದ ಕೂಗು ಹಾಕುತ್ತಿದ್ದಾರೆ. ಅಖಂಡ ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ ಮಾಡುತ್ತಿರುವುದು ಸಲ್ಲದು ಎಂದು ಕಿಡಿಕಾರಿದ್ದಾರೆ. ಅಭಿವೃದ್ಧಿ ಆಗದಿದ್ದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು ಇನ್ನಷ್ಟು ಗಟ್ಟಿ ಆಗಲಿದೆ ಎಂದು ಶ್ರೀಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಮಠಾಧೀಶರು ಇದೇ ತಿಂಗಳ 31ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡಲಾಗುವುದು. ಉತ್ತರ ಕರ್ನಾಟಕ ವಿಕಾಸ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆಗೆ ನಿರ್ಧರಿಸಾಗಿದೆ ಎಂದು ಸ್ವಾಮೀಜಿಗಳು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.‌ಸಿದ್ದರಾಮ ಸ್ವಾಮೀಜಿ ಹಾಗೂ ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

uttar karnataka swamiji ಬಜೆಟ್ ಅನ್ಯಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ