ಆಷಾಢದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

To state cabinet expansion: siddaramaiah

23-07-2018

ಬೆಂಗಳೂರು: ನಿಗಮ ಮಂಡಳಿ, ಸಚಿವ ಸ್ಥಾನ ಒಟ್ಟಿಗೆ ಭರ್ತಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ನವದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

30 ನಿಗಮ ಮಂಡಳಿ ಏಕ ಕಾಲದಲ್ಲಿ ಭರ್ತಿ ಮಾಡಲಾಗುವುದು. 20 ಕಾಂಗ್ರೆಸ್ ಮತ್ತು 10 ಜೆಡಿಎಸ್ ಗೆ ಹಂಚಿಕೆ ಆಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಲೋಕಸಭೆ ಚುನಾವಣೆ ಮೈತ್ರಿ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಯಾರೂ ಲೋಕಸಭೆ ‌ಚುನಾವಣೆ ಮೈತ್ರಿಗೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್ ಸಭಾಪತಿ ಆಯ್ಕೆ ಬಗ್ಗೆ ಇನ್ನೂ ಅಂತಿಮ ಆಗಿಲ್ಲ. ಜಿಲ್ಲಾ ಉಸ್ತುವಾರಿ ನೇಮಕ ಬಗ್ಗೆ ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

siddaramaiah Rahul Gandhi ನಿಗಮ ಮಂಡಳಿ ನವದೆಹಲಿಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ