ಸರ್ಕಾರಿ ಶಾಲೆ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್: ಸಿಎಂ

cm kumaraswamy said

23-07-2018

ರಾಮನಗರ: ಚನ್ನಪಟ್ಟಣಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ‘ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರ ನನಗೆ ಎರಡು ಕಣ್ಣುಗಳು ಇದ್ದ ಹಾಗೆ, ಚನ್ನಪಟ್ಟಣ ಕ್ಷೇತ್ರದ ಜನತೆ ಋಣ ನನ್ನ ಮೇಲಿದೆ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹೊಣೆ ನನ್ನ ಮೇಲಿದೆ, ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಕ್ಕೆ 24ಗಂಟೆ ಕುಡಿಯುವ ನೀರು ಒದಗಿಸಲಾಗುವುದು' ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ, ಮುಂದಿನ ಸೆಪ್ಟೆಂಬರ್‌ ತಿಂಗಳವರೆಗೆ ಬಿಡಬೇಕಿದ್ದ ಕಾವೇರಿ ನೀರನ್ನು ತಮಿಳುನಾಡಿಗೆ ಈಗಾಗಲೆ ಬಿಡಲಾಗಿದೆ. ಸದ್ಯಕ್ಕೆ ಕಾವೇರಿ ನೀರಿನ ಹಂಚಿಕೆ ವಿರುದ್ಧ ನಮಗೂ ತಮಿಳುನಾಡಿಗೆ ಆಗುವ ಸಂಘರ್ಷ ನಿಂತಿದೆ ಎಂದರು.

ಹಾಲು ಉತ್ಪಾದಕರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ನೂತನ ಐದು ಮೆಗಾ ಡೈರಿಗಳನ್ನು ಸ್ಥಾಪನೆ ಮಾಡಲಾಗುವುದು, ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳನ್ನು ಅವಳಿ ನಗರವನ್ನಾಗಿ ಘೋಷಣೆ ಮಾಡಲಾಗುವುದು. ಇದೇ ವರ್ಷದಲ್ಲಿ 2ಸಾವಿರ ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು, ರಾಮನಗರ-ಚನ್ನಪಟ್ಟಣ ಹೆದ್ದಾರಿ ಮಧ್ಯ 500 ಎಕರೆ ಪ್ರದೇಶದಲ್ಲಿ ರೇಷ್ಮೆ ಸೂಪರ್ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ರೈತರ ಸಾಲಮನ್ನಾ ವಿಚಾರವಾಗಿ ‘ದೇಶದ ಯಾವುದೇ ರಾಜ್ಯ ಮಾಡದ ರೈತರ ಸಾಲಮನ್ನಾ ಈ ನಿಮ್ಮ ಕುಮಾರಸ್ವಾಮಿ ಮಾಡಿದ್ದೇನೆ ಎಂದ ಅವರು, ಯಾವ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೋ ಆ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್, ಖಾಸಗಿ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ. ಬಡ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್. ಈ ಕುರಿತು ನಾಳೆ ಅಧಿಕಾರಿಗಳ‌ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy Bus Pass ಸರ್ವಾಂಗೀಣ ಕಾವೇರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ