ಗೌರಿ ಹತ್ಯೆ: ಹುಬ್ಬಳ್ಳಿಯಲ್ಲಿ ಮತ್ತಿಬ್ಬರು ಆರೋಪಿಗಳ ಸೆರೆ

Gauri Lankesh murder: another 2 accused arrested

24-07-2018

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿದೆ.

ಹುಬ್ಬಳ್ಳಿಯ ಅಮಿತ್ ಬಡ್ಡಿ ಮತ್ತು ಗಣೇಶ್ ಮಿಸ್ಕಿನ್ ಅವರನ್ನು ಎಸ್.ಐ.ಟಿ ಪೊಲೀಸರು ನಗರದ 3ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳನ್ನು ಹೆಚ್ಚಿ ವಿಚಾರಣೆಗಾಗಿ ಆಗಸ್ಟ್ 6ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿದೆ. ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಪರಶುರಾಮ್ ವಾಘ್ಮೋರೆ ಗುಂಡು ಹಾರಿಸಿದ್ದಾಗಿ ಎಸ್.ಐ.ಟಿ ಪೊಲೀಸರು ಈಗಾಗಲೇ ತಿಳಿಸಿದ್ದಾರೆ. ಘಟನೆ ನಡೆದ ನಂತರ ನಗರದ ವಿವಿಧೆಡೆಯಿಂದ ಕರೆ ಮಾಡಲಾಗಿದ್ದ ಒಂದು ಲಕ್ಷ ದೂರವಾಣಿ ಕರೆಗಳನ್ನು ಜಾಲಾಡಲಾಗಿತ್ತು. ಮೂರು ರಾಜ್ಯಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿತ್ತು.


ಸಂಬಂಧಿತ ಟ್ಯಾಗ್ಗಳು

Gauri Lankesh Parashuram Waghmore ಎಸಿಎಂಎಂ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ