ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Protection of livestock which illegally transported to slaughterhouse

25-07-2018

ಉತ್ತರ ಕನ್ನಡ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಧಾರವಾಡದ ಕಲಘಟಗಿಯಿಂದ ಉತ್ತರ ಕನ್ನಡದ ಭಟ್ಕಳಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 13 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಮೀರ್, ದಾದಾಪೀರ್ ಚೌದರಿ ಎಂಬುವರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಹಿರೇಗುತ್ತಿ ಹೊರ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Police Animals ಗೋಕರ್ಣ ಕಸಾಯಿಖಾನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ