ಬಿಎಂಟಿಸಿಗೆ ಮತ್ತೊಬ್ಬರು ಬಲಿ!

one more death because of bmtc bus

25-07-2018

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ನಲ್ಲಿ ಹೋಗುತ್ತಿದ್ದ ನಾಗರಾಜು ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುಮಾರಸ್ವಾಮಿ ಲೇಔಟ್‍ನ ಬಳಿ ನಿನ್ನೆ ರಾತ್ರಿ ನಡೆದಿದೆ, ಮಾರುತಿ ಬಡಾವಣೆಯ ನಾಗರಾಜು (45) ಅವರು ರಾತ್ರಿ 7.45ರ ವೇಳೆ ಸ್ಕೂಟರ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

BMTC Accident ಸ್ಕೂಟರ್ ದುರ್ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ