ಚಾಮರಾಜನಗರದಲ್ಲಿ ಬೃಹತ್ ಫುಡ್ ಪಾರ್ಕ್: ಜಾರ್ಜ್

Food park in chamarajnagar: k.j.george

25-07-2018

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ, ಮಂಡ್ಯ ಜಿಲ್ಲೆ ಸೇರಿದಂತೆ ಹಲವು ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕಾರ್ಖಾನೆಗಳು ಸುಗಮ ರೀತಿಯಲ್ಲಿ ನಡೆಯುತ್ತಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಮರಾಜನಗರದಲ್ಲಿ 1400 ಎಕರೆ ಪ್ರದೇಶದಲ್ಲಿ ಬೃಹತ್ ಫುಡ್ ಪಾರ್ಕ್ ನಿರ್ಮಿಸಲು ನಿರ್ಧರಿಸಲಾಗಿದೆ. ಸಾಕಷ್ಟು ಉದ್ಯಮಗಳು ಅಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು. ಅಲ್ಲದೆ ಮೈಸೂರಿನಲ್ಲಿ 4500 ಕೋಟಿ ರೂ.ಬಂಡವಾಳ ಹೂಡಿ ಏಷಿಯನ್ ಪೇಯಿಂಟ್ಸ್ ಕಾರ್ಖಾನೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

K. J. George industrial ವಿಧಾನಸೌಧ ಫುಡ್ ಪಾರ್ಕ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ