'ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ: ಚರ್ಚಿಸಿ ಸೂಕ್ತ ನಿರ್ಧಾರ'

cm reaction on anna bhagya scheme

25-07-2018

ಬೆಂಗಳೂರು: ಅನ್ನಭಾಗ್ಯ ಯೋಜನೆಯ 2ಕೆ.ಜಿ. ಅಕ್ಕಿ ಕಡಿತ ವಿಚಾರ ಕುರಿತಂತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ಕುರಿತಂತೆ ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ. ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಹಾದಾಯಿ ನದಿ ವಿವಾದ ಕುರಿತಂತೆ ಈಗಾಗಲೇ ಜಲಸಂಪನ್ಮೂಲ ಸಚಿವರು ಸೂಕ್ತ ದಾಖಲೆಗಳನ್ನು ಒದಗಿಸಿದ್ದಾರೆ. ನ್ಯಾಯಾಲಯದಲ್ಲಿ ತೀರ್ಪು ಏನೇ ಬಂದರೂ ಎದುರಿಸಲು ಸಿದ್ಧ ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಮೀಸಲಾತಿ ಪಟ್ಟಿ ಸಿದ್ದಗೊಂಡಿದ್ದು, ಸಲ್ಲಿಕೆ ಮಾಡುವುದು ಬಾಕಿ ಇದೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

anna bhagya Kumaraswamy ಸ್ಥಳೀಯ ಸಂಸ್ಥೆ ಬಹಿರಂಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ