ಸಿದ್ದರಾಮಯ್ಯರನ್ನು ಹೊಗಳಿದ ಕೆಪಿಸಿಸಿ ಅಧ್ಯಕ್ಷ

KPCC chaiman praised the Siddaramaiah

25-07-2018

ಬೆಂಗಳೂರು: 2017-18ರ ವರ್ಷದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಭಾರತಕ್ಕೆ ಮೊದಲ ಸ್ಥಾನವನ್ನು ಪಡೆಯುವ ಮೂಲಕ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಣಾಮಕಾರಿ ಹಾಗೂ ಪಾರದರ್ಶಕತೆಯನ್ನು ಹೊಂದಿತ್ತು ಎಂಬುದು ಇದರಿಂದ ಸಾಬೀತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದಿನ ಹಣಕಾಸು ವರ್ಷದಲ್ಲಿ ಶೇಕಡ 300ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಹೆಚ್ಚಳ ಕಂಡುಬಂದದ್ದು, ಅಂದಿನ ಆಡಳಿತ ಹೆಚ್ಚು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿತ್ತು. ದುರಾದೃಷ್ಠವಶಾತ್ ಕೆಲ ಭಾವೋದ್ವೇಗ ಕಾರಣಗಳಿಂದಾಗಿ ತಮ್ಮ ಪಕ್ಷ ಸೋಲನ್ನು ಒಪ್ಪಬೇಕಾಯಿತು. ಹೆಚ್ಚಿನ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರೂ ಮತ್ತೆ ಅಧಿಕಾರ ಪಡೆಯುವಲ್ಲಿ ಸಫಲರಾಗಿದ್ದೇವೆಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ