ಚನ್ನಪಟ್ಟಣದಿಂದ-ವಿಧಾನಸೌಧದವರೆಗೆ ಬಿಜೆಪಿ ಪಾದಯಾತ್ರೆ

BJP padayatra from today channapatna to vidhana soudha

26-07-2018

ರಾಮನಗರ: ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಮೂರು ದಿನಗಳ ಕಾಲ ರಾಮನಗರ ಬಿಜೆಪಿ ಘಟಕದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಿಎಂ ಸ್ವಕ್ಷೇತ್ರ ಚನ್ನಪಟ್ಟಣದಿಂದ ಪಾದಯಾತ್ರೆ ಆರಂಭಿಸಿದ್ದಾರೆ. ರಾಮನಗರದ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದರು. ಚನ್ನಪಟ್ಟಣದ ಕೆಂಗಲ್ ಆಂಜನೇಸ್ವಾಮಿಗೆ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದ್ದಾರೆ. ಚನ್ನಪಟ್ಟಣದಿಂದ ಬೆಂಗಳೂರಿನ ವಿಧಾನಸೌಧದವರೆಗೂ ಪಾದಯಾತ್ರೆ ಮಾಡಿ ಸಿಎಂ ಕುಮಾರಸ್ವಾಮಿಗೆ ಮನವಿ ಸಲ್ಲಿಸಲಿದ್ದಾರೆ. ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿರುವ ರೈತ ಮುಖಂಡರು ಭಾಗಿಯಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

padayatra BJP ಸಾಲಮನ್ನಾ ಸಿ.ಪಿ.ಯೋಗೇಶ್ವರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ