ಪೊಲೀಸ್ ಪೇದೆ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರಿಗೆ ಶಿಕ್ಷೆ

Illegal in police constable examination: court sentenced 2 years of jail

26-07-2018

ಕಲಬುರಗಿ: 2008ನೇ ಸಾಲಿನಲ್ಲಿ ರಾಜ್ಯ ನಾಗರೀಕ ಪೊಲೀಸ್ ಪೇದೆ ಹುದ್ದೆಗೆ ನಡೆದಿದ್ದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಇಬ್ಬರು ಅಭ್ಯರ್ಥಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. ಅಸಲಿ ಅಭ್ಯರ್ಥಿಗಳ ಬದಲಾಗಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಶಿವರಾಜ ಕಳ್ಳಾ ಹಾಗೂ ಶರಣು ಹಾಲಶೆಟ್ಟಿ ಶಿಕ್ಷೆಗೆ ಗುರಿಯಾದವರು. ಇಬ್ಬರಿಗೂ ಮೂರು ವರ್ಷ ಕಠಿಣ ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ ವಿಧಿಸಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಧೀಶರು ತೀರ್ಪು ಪ್ರಕಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Exam Police constable ಪ್ರವೇಶ ಪರೀಕ್ಷೆ ಅಕ್ರಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ