ಎಟಿಎಂ ಒಡೆದರೂ ಹಣ ದೋಚಲಾಗಲಿಲ್ಲ ಕಳ್ಳರಿಗೆ

A gang damaged ATM machine and attempted to robbery cash

26-07-2018

ಬೆಂಗಳೂರು: ಎಸ್‌ಬಿಐ ಬ್ಯಾಂಕ್ ಎಟಿಎಂ ಒಡೆದಿರುವ ಕಳ್ಳರು, ಹಣ ದೋಚಲು ವಿಫಲ ಯತ್ನ ನಡೆಸಿರುವ ಘಟನೆ ನೆಲಮಂಗಲ ಸಮೀಪದ ದಾಸನಪುರ ಗ್ರಾಮದಲ್ಲಿ ನಡೆದಿದೆ. ದಾಸನಪುರದ ಎಟಿಎಂ ಬಳಿ ಸೆಕ್ಯೂರಿಟಿ ಗಾರ್ಡ್ ಇಲ್ಲದಿರುವುದನ್ನು ಗಮನಿಸಿದ ದುಷ್ಕರ್ಮಿಗಳ ಒಳಗೆ ನುಗ್ಗಿ ಎಟಿಎಂ ಯಂತ್ರ ಒಡೆಯಲು ಸಾಕಷ್ಟು ಪ್ರಯತ್ನಪಟ್ಟಿದ್ದರು. ಏನು ಮಾಡಿದರೂ ಎಟಿಎಂ ಒಡೆಯಲಾಗೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೆಲ ಸಮಯದ ನಂತರ ಸ್ಥಳಕ್ಕೆ ಬಂದ ಸೆಕ್ಯುರಿಟಿ ಗಾರ್ಡ್‌ಗೆ ಯಂತ್ರ ಒಡೆದಿದ್ದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತ ಪೊಲೀಸರಿಗೆ ಮಾಹಿತಿ ತಿಳಿಸಿದ್ದ.

ಸ್ಥಳಕ್ಕೆ ನೆಲಮಂಗಲ ಡಿವೈಎಸ್ಪಿ ರಾಜೇಂದ್ರ ಕುಮಾರ್, ಮಾದನಾಯಕನಹಳ್ಳಿ ಠಾಣಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರೊಂದಿಗೆ ಶ್ವಾನದಳ ಆಗಮಿಸಿ, ಪರಿಶೀಲನೆ ನಡೆಸಿ ಸಿಸಿ ಟಿವಿ ದೃಶ್ಯಾವಳಿಯನ್ನು ಆಧರಸಿ ಕಳ್ಳರ ಪತ್ತೆಗಾಗಿ ಶೋಧ ನಡೆಸಿದ್ದಾರೆ.

 

 


ಸಂಬಂಧಿತ ಟ್ಯಾಗ್ಗಳು

ATM Money ಸೆಕ್ಯೂರಿಟಿ ಡಿವೈಎಸ್ಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ