‘ಪಕ್ಷದ ವಿರುದ್ಧ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಿದ್ದು ನಿಜ’

we have given notice to one who gave Statement against the party

26-07-2018

ಬೆಂಗಳೂರು: ಕಾಂಗ್ರೆಸ್‍ ನ ಕೆಲ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಪಕ್ಷದ ವಿರುದ್ಧ ಹೇಳಿಕೆ ನೀಡಿದ ಇಬ್ಬರಿಗೆ ನೋಟಿಸ್ ಜಾರಿಮಾಡಿದ್ದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡಗೆ ಪಕ್ಷದ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿವರಣೆ ಕೋರಿ ನೋಟಿಸ್ ನೀಡಿದ್ದಾರೆ. ಅವರಿಂದ ಏನು ಉತ್ತರ ಬರಲಿದೆ ಎಂಬುದನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ರಚನೆಯಾಗಿದೆ. ಮುಂದಿನ ಲೋಕಸಭೆ ಚುನಾವಣೆಗೂ ನಾವು ಒಟ್ಟಾಗಿ ತೆರಳಲಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸುವ ಕಡೆ ಜೆಡಿಎಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವ ಕಡೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಬೇಕಾಗಿದೆ. ಇದು ಪರಸ್ಪರ ಬೆಂಬಲ ಮೈತ್ರಿಯಾಗಿದೆ ಎಂದು ಖಂಡ್ರೆ ಹೇಳಿದರು.

ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಕೂಡ ಇದೇ ವಿಚಾರ ಚರ್ಚೆಯಾಗಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದ್ದರ ಆತ್ಮಾವಲೋಕನ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವತ್ತ ಗಮನ ಹರಿಸಲು ಸೂಚನೆ ನೀಡಲಾಗಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

Eshwar Khandre Kpcc ಹಿಂದುಳಿದ ವರ್ಗ ಮುಖಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ