ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸಾ ಕೇಂದ್ರ ಮೊರೆ ಹೋದ ಬಿಎಸ್ವೈ!

yeddyurappa has joined Naturopathy Center! total 5 days of complete rest

26-07-2018

ಬೆಂಗಳೂರು: ಚುನಾವಣೆ, ರಾಜ್ಯ ಪ್ರವಾಸದಿಂದ ದಣಿದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸಾ ಕೇಂದ್ರದ ಮೊರೆ ಹೋಗಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಆರೋಗ್ಯವನ್ನು ಸದೃಢವಾಗಿಸಿಕೊಳ್ಳಲು ಈಗಲೇ ಪ್ರಕೃತಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ನಗರದ ಹೊರವಲಯದಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ಬುಧವಾರ ಸಂಜೆ ದಾಖಲಾಗಿದ್ದು ಐದು ದಿನಗಳ ಕಾಲ ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಬಿಎಸ್ವೈ ಆಪ್ತ ಮೂಲಗಳು ತಿಳಿಸಿವೆ.

ಪ್ರತಿ ವರ್ಷ ಜಿಂದಾಲ್ ಗೆ ದಾಖಲಾಗಿ ಯಡಿಯೂರಪ್ಪ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದು, ಅದರಂತೆ ಈ ಬಾರಿಯೂ ದಾಖಲಾಗಿದ್ದಾರೆ. ಜುಲೈ 29ರವರೆಗೆ ಪ್ರಕೃತಿ ಚಿಕಿತ್ಸಾಲಯದಲ್ಲಿ ವಿವಿಧ ಚಿಕಿತ್ಸೆಗಳನ್ನು ಪಡೆದುಕೊಳ್ಳಲಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಅವಿರತವಾಗಿ ರಾಜ್ಯ ಪ್ರವಾಸ ಮಾಡಿದ್ದು ಚುನಾವಣಾ ಪ್ರಚಾರ ಕಾರ್ಯ ನಡೆಸಿದ್ದರು. ಇದರಿಂದ ಸಾಕಷ್ಟು ಬಳಲಿದ್ದು ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತ್ತೆ ನಿರಂತರ ರಾಜ್ಯ ಪ್ರವಾಸಕ್ಕೆ ತೆರಳಬೇಕಿದ್ದು ಆಗ ಆರೋಗ್ಯ ಕೈ ಕೊಡಬಾರದು, ದೇಹ ದಣಿಯಬಾರದು ಎಂದು ಪ್ರಕೃತಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೂಡ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಚುನಾವಣೆ ನಂತರ 10 ದಿನ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದರು.

 


ಸಂಬಂಧಿತ ಟ್ಯಾಗ್ಗಳು

Naturopathy yeddyurappa ಕೇಜ್ರಿವಾಲ್ ಚಿಕಿತ್ಸಾಲಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ