ಸಚಿವ ಸ್ಥಾನಕ್ಕಾಗಿ ಲಾಬಿ ಶುರು..!

3 mla

27-07-2018

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಷಾಢ ಮುಗಿದ ಬಳಿಕ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈಗಾಗಲೆ ಲಾಬಿ ಶುರುವಾಗಿದ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನ ಮೂವರು ಶಾಸಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು ಹಾಗೂ ಆರ್.ಆರ್.ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ರಾಹುಲ್ ಬಳಿ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎ ಪರಮೇಶ್ವರ್ ರನ್ನು ದಾಟಿ ರಾಹುಲ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯ ರಾಜಕಾರಣ, ಸಿಎಂ ನಡೆ, ಕಣ್ಣೀರು ಪ್ರಕರಣ ಬಗ್ಗೆಯೂ ರಾಹುಲ್ ವಿವರಣೆ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ತೀವ್ರ ಕುತೂಹಲ ಕೆರಳಿಸಿದೆ ಸಚಿವರುಗಳ ಭೇಟಿ.


ಸಂಬಂಧಿತ ಟ್ಯಾಗ್ಗಳು

Somashekar T munirathna ರಾಹುಲ್ ಗಾಂಧಿ ಕಣ್ಣೀರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ