'ಗ್ರಹಣ ಸಮಯದಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಬಂದ್'27-07-2018

ಮೈಸೂರು: ಚಂದ್ರ ಗ್ರಹಣ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3.30ರವರೆಗೆ ವಿಶೇಷ ಪೂಜೆ ಇರಲಿದೆ ಎಂದು ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಹೇಳಿದ್ದಾರೆ. ಮೊದಲಿನಿಂದಲು ಗ್ರಹಣದ ಸಂದರ್ಭದಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರುತ್ತಾ ಬಂದಿದೆ. ಈ ಬಾರಿಯೂ ಗ್ರಹಣದ ಸಮಯದಲ್ಲಿ ಚಾಮುಂಡಿಬೆಟ್ಟದಲ್ಲಿ ಪೂಜೆ ನಡೆಯಲಿದೆ. ಆ ಸಂದರ್ಭದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆ ಬೆಳಿಗ್ಗೆ ಒಂದು ಗಂಟೆಗಳ ಕಾಲ ಶುದ್ಧಿ ಕಾರ್ಯ ನೆರವೇರಲಿದೆ. ಗ್ರಹಣದ ಸಂದರ್ಭದಲ್ಲಿ ಭಕ್ತರು ತುಪ್ಪದ ದೀಪ ಹಚ್ಚಿ ಪ್ರಾರ್ಥನೆ ಸಲ್ಲಿಸಬಹುದು ಎಂದರು.


ಸಂಬಂಧಿತ ಟ್ಯಾಗ್ಗಳು

chamundeshwari Temple ಚಂದ್ರ ಗ್ರಹಣ ಪೂಜೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ