‘ಅಖಂಡ ಕರ್ನಾಟಕವನ್ನು ಭಾಗ ಮಾಡುವುದು ಒಳ್ಳೆಯದಲ್ಲ'

Minister R.V.Deshpande reaction about  uttara karnataka bandh

27-07-2018

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗ್ರಹಿಸಿ ಬಂದ್ ಕರೆ ನೀಡಿರುವ ಹಿನ್ನೆಲೆ, ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್.ವಿ.ದೇಶಪಾಂಡೆ, ‘ಅಖಂಡ ಕರ್ನಾಟಕವನ್ನು ಭಾಗ ಮಾಡುವುದು ಒಳ್ಳೆಯದಲ್ಲ’ ಎಂದು ಹೇಳಿದ್ದಾರೆ. ಯಲಹಂಕದ ನಿಟ್ಪೆ ಕಾಲೇಜಿನಲ್ಲಿ ನಡೆದ 5ನೇ ಅಂತರಾಷ್ಟ್ರೀಯ ತಾಂತ್ರಿಕ ಸಮ್ಮೇಳನದಲ್ಲಿ ಮಾತನಾಡಿದ ಸಚಿವರು, ರಾಜ್ಯದ ಕೆಲವು ಭಾಗಗಳಲ್ಲಿ ಅಭಿವೃದ್ಧಿ ಕುಂಠಿತ ಆಗಿದೆ. ರಾಜ್ಯದ ಸಮಗ್ರ ಅಭಿವೃದ್ದಿ ನಮ್ಮ ಗುರಿ.  ಹೋರಾಟದಿಂದ ಯಾವುದೇ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ, ಮಾತುಕತೆಗಳ ಮುಲಕ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದರು.

ಉತ್ತರ ಕರ್ನಾಟಕದವರು ಜೆಡಿಎಸ್ ಗೆ ಮತ ಹಾಕಿಲ್ಲ ಎಂಬರ್ಥದಲ್ಲಿ  ಕುಮಾರಸ್ವಾಮಿಯವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ದೇಶಪಾಂಡೆ ಮುಖ್ಯಮಂತ್ರಿ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸುವುದು ಬೇಡ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗಳಿಸದ ಕಾರಣ ಬೇಸರದಿಂದ ಹೇಳಿರಬಹುದು ಎಂದರು.


ಸಂಬಂಧಿತ ಟ್ಯಾಗ್ಗಳು

R.V.Deshpande H.D.Kumaraswamy ಮಾತುಕತೆ ಸಮ್ಮೇಳನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ