ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದ ಕುಖ್ಯಾತ ರೌಡಿ ಅರೆಸ್ಟ್

Rowdy yuvaraja alias papa arrested

27-07-2018

ಬೆಂಗಳೂರು: ರೌಡಿ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಕುಖ್ಯಾತ ರೌಡಿ ಯುವರಾಜ ಅಲಿಯಾಸ್ ಪಾಪ ನನ್ನು ಗೂಂಡಾ ಕಾಯ್ದೆಯಡಿಯಲ್ಲಿ ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಂದಿನಿ ಲೇಔಟ್‍ನ ವಿಜಯಾನಂದನಗರದ ರೌಡಿ ಯುವರಾಜ (28) ನಂದಿನಿಲೇಔಟ್, ಮಹಾಲಕ್ಷ್ಮೀಲೇಔಟ್, ಸುಬ್ರಮಣ್ಯನಗರ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ರೌಡಿ ಚಟುವಟಿಕೆಯಲ್ಲಿ ತೊಡಗಿ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ.

ಕಳೆದ 2009 ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಎರಡು ಕೊಲೆ, ಕೊಲೆ ಪ್ರಯತ್ನ, ಸುಲಿಗೆ, ದರೋಡೆ, ಅಪಹರಣ ಸೇರಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು . ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಪಟ್ಟಿಯಲ್ಲಿದ್ದಾನೆ.

2017ರಲ್ಲಿ ದಾವಣಗೆರೆಯ ಕೆ.ಟಿ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನ್ನ ಸಹಚರರ ಜೊತೆ ಸೇರಿ ಎದುರಾಳಿ ಗ್ಯಾಂಗಿನ ಓರ್ವನ ಕೊಲೆಗೆ ಸಂಚು ರೂಪಿಸುವ ಪ್ರಕರಣದಲ್ಲಿ ಯುವರಾಜ್ ಬಂಧಿನಾಗಿದ್ದ., ಈತನು ರೌಡಿ ಚಟುವಟಿಕೆ ಮತ್ತು ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದು ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುತ್ತಿರುವುದರಿಂದ ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಡಿಸಿಪಿ ಚೇತನ್‍ ಸಿಂಗ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rowdy arrested ಅಪಹರಣ ಭೀತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ