ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

farmers protest

27-07-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ವಿದ್ಯಾರ್ಥಿನಿಯರ ಸಮಸ್ಯೆಗಳಂತೂ ಹೇಳತೀರದಾಗಿದೆ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದಿದ್ದು, ರೈತರು ಪ್ರತಿಭಟನೆಗಿಳಿದಿದ್ದಾರೆ. ಶೌಚಾಲಯಕ್ಕೆಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ತಾಲ್ಲೂಕು ಕಚೇರಿ ಮುಂದೆ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಶೌಚಾಲಯ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Farmers protest ಹಸಿರು ಸೇನೆ ಸಂಕಷ್ಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ