ಪ್ರತ್ಯೇಕತೆ ಕೂಗಿಗೆ ಸಿದ್ದರಾಮಯ್ಯ ಆಕ್ರೋಶ

siddaramaiah reaction on uttar karnataka bandh

30-07-2018

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕತೆಗೆ ಎದ್ದಿರುವ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಉತ್ತರ ದಕ್ಷಿಣ ಎಂದು ಬೇಧ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ ಅಖಂಡ ಕರ್ನಾಟಕ,  ಚಾರಿತ್ರಿಕ ಕಾರಣಗಳಿಂದಾಗಿ ಕೆಲವು ಪ್ರದೇಶಗಳು ಹಿಂದುಳಿದದ್ದು ನಿಜ, ಅವುಗಳ ಅಭಿವೃದ್ಧಿಗೆ ಒತ್ತು ನೀಡುವ ಪ್ರಾದೇಶಿಕ ನ್ಯಾಯದ ಪರವಾಗಿ ನಮ್ಮ ಪಕ್ಷ ಇದೆ’ ಅಖಂಡ ಕರ್ನಾಟಕ ನಮ್ಮ ಬದ್ಧತೆ ಎಂದಿದ್ದಾರೆ.

'ಉತ್ತರ-ದಕ್ಷಿಣದ ನಡುವಿನ ಅಂತರವನ್ನು‌ ಹೋಗಲಾಡಿಸಿ, ಸೌಹಾರ್ದತೆಯ ಪರಂಪರೆಯನ್ನು ಗಟ್ಟಿಗೊಳಿಸಲಿಕ್ಕಾಗಿಯೇ ನಾನು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ, ಆ ಕ್ಷೇತ್ರದ ಜನರ ಆಶೀರ್ವಾದ ನನ್ನ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಜಾತಿ-ಧರ್ಮಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುವುದು‌ ಜನದ್ರೋಹದ ಕೆಲಸ. ಅಖಂಡ ಕರ್ನಾಟಕದ ರಕ್ಷಣೆ-ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ, ನಾನು‌ ಸದಾ ಸಿದ್ಧ' ಎಂದು ಟ್ಟೀಟ್ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

siddaramaiah tweet ಅಭಿವೃದ್ಧಿ ಬದ್ಧತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ