ಬಸ್ ನಲ್ಲಿ ಪ್ರಯಾಣಿಸಿದ್ದಾರೆ ಸಚಿವ ಡಿ.ಸಿ.ತಮ್ಮಣ್ಣ

Transport minister traveled in a bus

30-07-2018

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು, ನಗರ ಸಾರಿಗೆ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ ಗಮನ ಸೆಳೆದರು.

ನಗರ ಸಾರಿಗೆ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ‌ ಸಾರಿಗೆ ಸಂಸ್ಥೆಯ ಸಮಸ್ಯೆಗಳನ್ನು ಆಲಿಸಿದ್ದಾರೆ. ಹುಬ್ಬಳ್ಳಿಯ ಸಿಬಿಟಿಯಿಂದ ಕಿತ್ತೂರು ರಾಣೆ ಚೆನ್ನಮ್ಮ ವೃತ್ತದವರೆಗೆ ನಗರ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಟಿಕೇಟ್ ಪಡೆದು, ಪ್ರಯಾಣ ಮಾಡಿದರು. ಈ ವೇಳೆ ಬಸ್ ಚಾಲಕರು ಹಾಗೂ ನಿರ್ವಾಹಕರ ಸಮಸ್ಯೆ ಹಾಗೂ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇನ್ನು ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ