ಮಾಧ್ಯಮಗಳ ಮೇಲೆ ಮತ್ತೆ ಹರಿಹಾಯ್ದ ಸಿಎಂ ಕುಮಾರಸ್ವಾಮಿ

CM Kumaraswamy blamed media again!

30-07-2018

ಬೆಂಗಳೂರು: ಪ್ರತ್ಯೇಕ ಉತ್ತರ ಕರ್ನಾಟಕ ಕೂಗಿಗೆ ಮಾಧ್ಯಮಗಳೇ ನೇರ ಕಾರಣ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ.

ಪ್ರತ್ಯೇಕ ಉತ್ತರ ಕರ್ನಾಟಕ ವಿಷಯದ ಕುರಿತು ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಉತ್ತರ ಕರ್ನಾಟಕ ವಿಷಯದಲ್ಲಿ ಬೆಂಕಿ ಹಚ್ಚುತ್ತಿರುವವರು ನೀವು (ಮಾಧ್ಯಮಗಳು). ಪ್ರತಿಯೊಂದು ವಿಷಯದಲ್ಲಿ ತಪ್ಪೇ ಎತ್ತಿ ತೋರಿಸುತ್ತಾ ಹೋದರೆ ರಾಜ್ಯ ಉದ್ಧಾರವಾಗಬೇಕೋ ಅಥವಾ ಹಾಳಾಗಬೇಕೋ ಅದು ನಿಮಗೆ ಸೇರಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಅಖಂಡ ಕರ್ನಾಟಕ ಎಂಬುದನ್ನು ಮೊದಲೇ ಹೇಳಿದ್ದೇನೆ. ಆದರೆ ಪ್ರತ್ಯೇಕ ಉತ್ತರ ಕರ್ನಾಟಕ ಕೂಗಿಗೆ ಕುಮ್ಮಕ್ಕು ಕೊಟ್ಟವರು ನೀವೇ(ಮಾಧ್ಯಮ) ಎಂದು ದೂರಿದರು. ಉತ್ತರ ಕರ್ನಾಟಕದ ಬಗ್ಗೆ ನಾನು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೆ ಮಾಧ್ಯಮಗಳಲ್ಲಿ ಇದರ ಬಗ್ಗೆಯೇ ಪದೇ ಪದೆ ಚರ್ಚೆ ನಡೆಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ