ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಚಿವರೊಬ್ಬರಿಗೆ ಕ್ಲೀನ್ ಚಿಟ್

A former minister Rudrappa Lamani

30-07-2018

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿದ್ದ ಮಾಜಿ ಸಚಿವ ರುದ್ರಪ್ಪ ಲಮಾಣಿಗೆ ಕ್ಲೀನ್ ಚಿಟ್ ಸಿಕ್ಕಿದೆ. ವಿಶೇಷ ನ್ಯಾಯಾಲಯ ಆರೋಪದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಸಂಸದರು ಹಾಗೂ ಶಾಸಕರ ವಿಶೇಷ ಕೋರ್ಟ್ ನಿಂದ ಆದೇಶ ಹೊರಬಿದ್ದಿದ್ದು, ಲೈಂಗಿಕ ದೌರ್ಜನ್ಯದ ಪ್ರಕರಣವನ್ನು 2013ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ದಾಖಲು ಮಾಡಲಾಗಿತ್ತು.

ಏನಿದು ಘಟನೆ: ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹಾವೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ತನ್ನನ್ನು ಮನೆಯಲ್ಲಿ ಕೂಡಿ ಹಾಕಿ ಸೀರೆ ಎಳೆದು, ಅಸಭ್ಯವಾಗಿ ವರ್ತನೆ ಮಾಡಿದ್ದರು ಎಂಬ ಆರೋಪವನ್ನು ಮಾಡಿದ್ದರು. ಜೊತೆಗೆ ನೀಡಲಾದ ದೂರಿನಲ್ಲಿ ಲಮಾಣಿ ಸೇರಿ ಹಲವರ ವಿರುದ್ಧ ದೂರು ದಾಖಲಾಗಿತ್ತು.

ತನಿಖೆ ನಡೆಸಿದ್ದ ಹಾವೇರಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣ ಇತ್ತೀಚಿಗೆ ಬೆಂಗಳೂರಿನ ವಿಶೇಷ ಕೋರ್ಟ್ ಗೆ ವರ್ಗಾವಣೆಯಾಗಿತ್ತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಇಂದು ಆದೇಶ ನೀಡಿದೆ. ಸಾಕ್ಷಾಧಾರಗಳ ಕೊರತೆಯಿಂದ ರುದ್ರಪ್ಪ ಲಮಾಣಿ ಸೇರಿ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ನಗರದ ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ಬಿ.ವಿ.ಪಾಟಿಲ್ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ. ಇನ್ನು ಇದೇ ವೇಳೆ ಶಾಸಕ ನೆಹರು ಓಲೆಕಾರ್ ವಿರುದ್ಧ ದಾಖಲಾಗಿದ್ದ  ಬೆದರಿಕೆ ಪ್ರಕರಣವೂ ಖುಲಾಸೆಗೊಂಡಿದೆ.

 

 


ಸಂಬಂಧಿತ ಟ್ಯಾಗ್ಗಳು

Rudrappa Lamani sexual harassment ಬೆದರಿಕೆ ಅಸಭ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ