ಚರಂಡಿಗೆ ಉರುಳಿಬಿದ್ದ ಶಾಲಾ ಬಸ್

school bus fell down  in drainage

31-07-2018

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ರಸ್ತೆ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಹಾಸನದ ಹೊರವಲಯದ ದೊಡ್ಡಕೊಂಡಗೊಳ ಗ್ರಾಮದ ಬಳಿ ಘಟನೆ ನಡೆದಿದೆ. ಶಾಲಾ ಬಸ್ ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ದೊಡ್ಡಕೊಂಡಗೊಳ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ನಾಲ್ಕೈದು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಉರುಳಿ ಬಿದ್ದ ತಕ್ಷಣ ಸ್ಥಳದಲ್ಲಿದ್ದ ಗ್ರಾಮಸ್ಥರು ದೌಡಾಯಿಸಿ ಮಕ್ಕಳನ್ನು ರಕ್ಷಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

School bus accident ಚರಂಡಿ ಪ್ರಾಣ ಹಾನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ