‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡ’31-07-2018

ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡ ಎಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ಮಹಾದೇವ ಪತ್ರಿಕಾಗೋಷ್ಠಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದ ಮುಂದೆ ಇಂದು ಸಾಂಕೇತಿಕ ಪ್ರತಿಭಟನೆ ಹಿನ್ನೆಲೆ ಮಾತನಾಡಿದ ಅವರು, ಪ್ರತ್ಯೇಕತೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ 13 ಜಿಲ್ಲೆಗಳು ಅಭಿವೃದ್ಧಿಯಾಗಲಿ. ವಿವಿಧ ಕ್ಷೆತ್ರಗಳಲ್ಲಿ ಜಿಲ್ಲೆಗಳಿಗೆ ಅನ್ಯಾಯವಾಗಿದೆ. ಶಾಸಕರು ಪ್ರತ್ಯೇಕ ರಾಜ್ಯದ ಕೂಗನ್ನು ಕೈ ಬಿಡಬೇಕು. ಶಾಸಕ ಉಮೇಶ ಕತ್ತಿ, ಪಿ.ರಾಜೀವ್, ಶ್ರೀರಾಮಲು ಶಾಸಕರು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮುಂದಾಗಿದ್ದಾರೆ. ಅವರೆಲ್ಲರೂ ಇದನ್ನೆಲ್ಲಾ ಕೈ ಬಿಟ್ಟು ಅಭಿವೃದ್ಧಿಗೋಸ್ಕರ ಹೋರಾಟ ಮಾಡಲಿ, ರಾಜ್ಯವನ್ನು ಒಡೆಯುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

karave Narayana Gowda ವಿರೋಧ ಹೋರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ