ಹಿರಿಯ ರಾಜಕಾರಣಿ, ಕಾಗೋಡು ತಿಮ್ಮಪ್ಪ ರಾಜಕೀಯ ನಿವೃತ್ತಿ

Ex-vidhana sabha speaker kagodu thimmappa announced retired

31-07-2018

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮಾಜಿ ಸಭಾಧ್ಯಕ್ಷರು ಹಾಗು ಮಾಜಿ ಸಚಿವರಾಗಿದ್ದಂತಹ ಕಾಂಗ್ರೆಸ್ ನ ಹಿರಿಯ ರಾಜಕಾರಣಿ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ಇನ್ನು ಮುಂದೆ ಯಾವುದೇ ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಸಂಪೂರ್ಣವಾಗಿ ರಾಜಕೀಯ ನಿವೃತ್ತಿ ತೆಗೆದುಕೊಂಡಿದ್ದೇನೆ' ಎಂದು ಹೇಳಿದ್ದಾರೆ.

ಚುನಾವಣೆ ರಾಜಕೀಯ ಸಾಕಾಗಿದೆ, ಇಷ್ಟು ವರ್ಷ ಹೋರಾಟ ಮಾಡಿದ್ದಾಯ್ತು. ಈಗ ವಯಸ್ಸಾಗಿದೆ, ಈಗ ಹೋರಾಟ ಸಾಧ್ಯವಿಲ್ಲ, ಹಾಗಾಗಿಯೇ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದರು.

ಇದೇ ವೇಳೆ ಉತ್ತರ ಕರ್ನಾಟಕ ಪ್ರತ್ಯೇಕತೆ ವಿಚಾರದ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ರಾಜ್ಯ ವಿಭಜನೆಗೆ ಮುಂದಾಗುವುದು ಅವಿವೇಕದ ಪರಮಾವಧಿ. ಯಾವುದೇ ಕಾರಣಕ್ಕೂ ರಾಜ್ಯ ವಿಭಜನೆಯ ಮಾತನಾಡಬಾರದು. ಹಲವು ದಶಕಗಳ ಹೋರಾಟದಿಂದ ಕರ್ನಾಟಕ ಏಕೀಕರಣವಾಗಿದೆ. ಅಖಂಡ ಕರ್ನಾಟಕ ನಿರ್ಮಾಣವಾಗಿದೆ. ಯಾವುದೇ ಕಾರಣಕ್ಕೂ ರಾಜ್ಯ ಇಬ್ಭಾಗವಾಗಬಾರದು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ