ಬಸ್ ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ

students protest by stopping buses at koppal

01-08-2018

ಕೊಪ್ಪಳ: ಶಾಲಾ ಕಾಲೇಜುಗಳಿಗೆ ತೆರಳಲು ಬಸ್ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದು, ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಗಂಗಾವತಿ ತಾಲ್ಲೂಕಿನ ಹಣವಾಳ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ಇಲ್ಲದೆ ಕಂಗೆಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ನೂರಾರು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಿಸಿದ್ದಾರೆ.

ಹಣವಾಳ ಗ್ರಾಮದಿಂದ ನಿತ್ಯ ಶಾಲಾ-ಕಾಲೇಜಿಗೆ ನೂರಾರು ವಿದ್ಯಾರ್ಥಿಗಳು ಹೋಗುತ್ತಾರೆ. ಬೇರೆ ಊರುಗಳಿಂದ ಜನರನ್ನು ಹತ್ತಸಿಕೊಂಡು ಹೋಗುವುದರಿಂದ ಗ್ರಾಮದಲ್ಲಿ ಬಸ್ ಗಳು ನಿಲ್ಲಿಸುವುದೂ ಇಲ್ಲ. ಇದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಶಾಲೆಗೆ ತೆರಳು ಹರಸಾಹಸವೇ ಪಡಬೇಕಾಗಿದೆ. ಹಣವಾಳ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿ ಈ ಹಿಂದೆ ಹಲವು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಳ್ಳದಿದ್ದು, ವಿದ್ಯಾರ್ಥಿಗಳ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಹಣವಾಳ ಮಾರ್ಗವಾಗಿ ಚಳ್ಳೂರು, ನವಲಿ, ಜೀರಾಳಗೆ ಮಾರ್ಗವಾಗಿ ತೆರಳುವ ಬಸ್ ಗಳನ್ನು ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bus Students ಶಾಲಾ ಕಾಲೇಜು ಕೊರತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ