ತನ್ನ ಮನೆಯಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

A farmer committed suicide at his home by consuming poison

01-08-2018

ಮೈಸೂರು: ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆಗಳು ಮುಂದುವರೆದಿವೆ. ಹುಣಸೂರು ತಾಲ್ಲೂಕಿನ ಹುನಗನಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜೇಗೌಡ (35) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿದ್ದಾರೆ. ವಿಷ ಸೇವಿಸಿ ಒದ್ದಾಡುತ್ತಿದ್ದ ಮಂಜೇಗೌಡರನ್ನು ಹುಣಸೂರಿನ ಸಾರ್ವಜನಿಕ ಆಸ್ಪತ್ರೆಗೆ  ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸುಮಾರು 5 ಎಕರೆ ಜಮೀನು ಹೊಂದಿದ್ದ ರೈತ ಮಂಜೇಗೌಡ. ಹೊಗೆ ಸೊಪ್ಪು ಬೆಳೆ ಬೆಳೆದಿದ್ದರು. ಸಕಾಲಕ್ಕೆ ಮಳೆ ಬಾರದೆ ಬೆಳೆ ಕೈ ಕೊಟ್ಟಿತ್ತು. ಮಂಜೇಗೌಡ ತಂದೆ ಸಿದ್ದೇಗೌಡ 6.60 ಲಕ್ಷ ಸಾಲ ಪಡೆದಿದ್ದರು. ಮಂಜೇಗೌಡ ಸಹ 2 ಲಕ್ಷ ಕೈಸಾಲ ಮಾಡಿಕೊಂಡಿದ್ದರು. ಇದೀಗ ಬೆಳೆಯೂ ಸರಿಯಾಗಿ ಬರದೆ, ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.  ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

poision Farmer ಎಕರೆ ಹೊಗೆ ಸೊಪ್ಪು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ