‘ನಾಳೆ ಉತ್ತರ ಕರ್ನಾಟಕದಾದ್ಯಂತ ಬಂದ್ ಮಾಡಲಾಗುವುದು’01-08-2018

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ 13 ಜಿಲ್ಲೆಗಳಲ್ಲೂ ಹೋರಾಟ ನಡೆಸಲಿದ್ದೇವೆ ಎಂದು, ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದ್ದಾರೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ, ಉತ್ತರ ಕರ್ನಾಟಕಕ್ಕೆ ಎಲ್ಲಾ ರಂಗಗಳಲ್ಲಿ ಕೂಡಾ ಅನ್ಯಾಯ ಮಾಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಅಗಸ್ಟ್ 2ಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್ ಆಚರಣೆ ಮಾಡಲಾಗುವುದು. ಈ ಹೋರಾಟಕ್ಕೆ ಮಠಾಧೀಶರು ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಸರ್ಕಾರಿ, ಅರೆಸರ್ಕಾರಿ, ಶಾಲಾ ಕಾಲೇಜುಗಳು ಖಾಸಗಿ ಕಚೇರಿಗಳು ಅಂಗಡಿ ಮುಂಗ್ಗಟ್ಟುಗಳು ಸಂಪೂರ್ಣ ಬಂದ್ ಆಗಲಿವೆ. ಉತ್ತರ ಕರ್ನಾಟಕದಲ್ಲಿ 24 ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ. ಬಂದ್ ಮಾಡಿ ಪ್ರತಿಭಟಿಸಲಿದ್ದೇವೆ ಎಂದು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Farmers uttara karnataka ರಾಜ್ಯಾಧ್ಯಕ್ಷ ಅನ್ಯಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ