ಲೈಂಗಿಕ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ

sexual harassment a women committed suicide

01-08-2018

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ಲೈಂಗಿಕ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರದ ಆಶೋಕನಗರ ನಿವಾಸಿ ಕವಿತಾ (28)ಎಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಮನೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಮಹಿಳೆ, ತೀವ್ರ ಸುಟ್ಟಗಾಯಗಳಿಂದ ನರಳುತ್ತಿದ್ದು, ಕೂಡಲೆ ಆಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾಯಿಕೃಷ್ಣಮೂರ್ತಿ ಎಂಬುವವರು ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

ಕವಿತಾ ಅವರ ಪತಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ದಂಪತಿಗೆ 7 ವರ್ಷದ ಗಂಡು ಮಗುವಿದೆ. ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ವಿಜಯಪುರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ