ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Horrific Murder of young guy at kalasipalyam

01-08-2018

ಬೆಂಗಳೂರು: ಹಳೆಯ ದ್ವೇಷದ ಹಿನ್ನಲೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಯುವಕನನ್ನು ಮಚ್ಚಿ ಲಾಂಗುಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿರುವ ಧುರ್ಘಟನೆ ಕಳಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕಲಾಸಿಪಾಳ್ಯದ ಹಾರ್ಡ್‍ವೇರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಾಲ್ಮೀಕಿನಗರದ ಸಯ್ಯದ್ ಅಮೀನ್ (23) ರಾತ್ರಿ 10ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬಂಬೂ ಬಜಾರ್ ನ ಬಳಿ ಐದಾರು ಮಂದಿ ದುಷ್ಕರ್ಮಿಗಳ ತಂಡ ಏಕಾಏಕಿ ಮಾರಕಾಸ್ತ್ರಗಳನ್ನು ಹಿಡಿದು ಅಡ್ಡಗಟ್ಟಿ ಜಗಳ ತೆಗೆದಿದ್ದಾರೆ. ಅವರಿಂದ ತಪ್ಪಿಸಿಕೊಂಡು ಓಡಲು ಯತ್ನಿಸಿದ ಅಮೀನ್‍ ನನ್ನು ಅಟ್ಟಾಡಿಸಿಕೊಂಡು ಹೋದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ. ಈ ಹಿಂದೆ ಅಮೀನ್ ಸಹೋದರರು ಹಾಗೂ ಮೈಸೂರು ಮೂಲದ ವ್ಯಕ್ತಿಯೋರ್ವನ ಜತೆ ಗಲಾಟೆ ನಡೆದಿತ್ತು ಇದೇ ವಿಚಾರಕ್ಕೆ ಮೈಸೂರು ಮೂಲದ ವ್ಯಕ್ತಿಗಳಿಂದಲೇ ಅಮೀನ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಲಾಸಿಪಾಳ್ಯ ಪೊಲೀಸರು ಪ್ರಕರಣದ ಪತ್ತೆಗಾಗಿ ಮೂರು ತಂಡಗಳನ್ನಾಗಿ ಮಾಡಿ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಡಿಸಿಪಿ ರವಿ ಚೆನ್ನಣ್ಣನವರ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder weapons ದುಷ್ಕರ್ಮಿ ಮಾರಕಾಸ್ತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ